ಫಲಿತಾಂಶದ ದಿನ ಸಮೀಕ್ಷೆಗಳು ಉಲ್ಟಾ ಆಗಲಿವೆ; ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಈ ಬಾರಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ

ಮತದಾನೋತ್ತರ ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ ಗೆ ಮೇಲುಗೈ ಎಂದು ಹೇಳಿದ್ದು, ಎರಡು ಸಮೀಕ್ಷೆಗಳು ಮಾತ್ರ ಬಿಜೆಪಿಗೆ ಗೆಲುವು ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಚುನಾವಣಾ ಫಲಿತಾಂಶದ ದಿನ ಸಮೀಕ್ಷೆಗಳು ಉಲ್ಟಾ ಆಗಲಿವೆ ಎಂದಿದ್ದಾರೆ.

ಕಳೆದ ಬಾರಿಯೂ ಸಮೀಕ್ಷೆಗಳು ಕಾಂಗ್ರೆಸ್ 107 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದರು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆಯಿದೆ. ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಶಿಗ್ಗಾಂವಿ ಜನರು ನನಗೆ ತೋರಿದ ಪ್ರೀತಿಗೆ ಚಿರಋಣಿ. ಚುನಾವಣೆಯನ್ನು ಹಬ್ಬದ ರೀತಿ ಆಚರಣೆ ಮಾಡಿದರು. ನನ್ನ ವಿರುದ್ಧ ಹಲವರು ಷಡ್ಯಂತ್ರ, ಅಪಪ್ರಚಾರ ಮಾಡಿದರೂ ಅದೂ ನಿನ್ನೆಗೆ ಮುಗಿದಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read