ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತದಾರರ ಓಲೈಕೆಗೆ ಭರ್ಜರಿ ಕಸರತ್ತು ನಡೆಸಿದ್ದು, ಕೇಂದ್ರ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಫೆಬ್ರವರಿ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರದ ಪೆರಸಂದ್ರ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಕಾಂಗ್ರೆಸ್ ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ. ರಾಜಸ್ಥಾನ ಸೇರಿ ವಿವಿಧ ರಾಜ್ಯಗಳಲ್ಲಿ ನೀಡಿದ ಆಶ್ವಾಸನೆ ಏನಾಯಿತು? ಕಾಂಗ್ರೆಸ್ ಎಂದರೆ ಬರಿ ಸುಳ್ಳು. ಕಾಂಗ್ರೆಸ್ ನಲ್ಲಿ ಈಗಿರುವವರು ಬರಿ ನಕಲಿ ಗಾಂಧಿಗಳು ಎಂದು ಕಿಡಿಕಾರಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read