ಫೆಬ್ರವರಿ 24 ಕ್ಕೆ ‘ಗೌಳಿ’ ರಿಲೀಸ್

ಶ್ರೀನಗರ ಕಿಟ್ಟಿ ನಟನೆಯ ಸೂರ ನಿರ್ದೇಶನದ ಬಹು ನಿರೀಕ್ಷಿತ ‘ಗೌಳಿ’ ಸಿನಿಮಾ ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೇ ತಿಂಗಳು ಫೆಬ್ರವರಿ 24ರಂದು  ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿರುವ ಶ್ರೀನಗರ ಕಿಟ್ಟಿ ಅವರ ರಗಡ್ ಲುಕ್ ಗೆ ಸಿನಿ ಪ್ರೇಕ್ಷಕರು ಈಗಾಗಲೇ ಫಿದಾ ಆಗಿದ್ದಾರೆ. ಈ ಚಿತ್ರದ ಹಾಡುಗಳು ಕೂಡ ಯೂಟ್ಯೂಬ್ ನಲ್ಲಿ ಭರ್ಜರಿ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಟ್ರೆಂಡಿಂಗ್ ನಲ್ಲಿವೆ.

ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಅವರಿಗೆ ಜೋಡಿಯಾಗಿ ಪಾವನ ಅಭಿನಯಿಸಿದ್ದು, ಶರತ್ ಲೋಹಿತಾಶ್ವ, ರಂಗಾಯಣ ರಘು, ಕಾಕ್ರೋಚ್ ಸುಧಿ, ಯಶ್ ಶೆಟ್ಟಿ, ಶಿವಣ್ಣ ರುದ್ರೇಶ್, ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ. ಸೋಹನ್ ಫಿಲಂ ಫ್ಯಾಕ್ಟರಿ ಬ್ಯಾನರ್ ನಡಿ ರಘು ಸಿಂಗಮ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read