ಫ್ಯಾಶನ್ ಶೋ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಇತ್ತೀಚೆಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಹಲವು ಪ್ರಕರಣಗಳು ನಡೆದಿದ್ದು, ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಕಾಲೇಜು ವಾರ್ಷಿಕೋತ್ಸವದ ಸಮಾರಂಭದಲ್ಲಿ ಫ್ಯಾಶನ್ ಶೋ ವೇಳೆ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಮೈಸೂರು ಜಿಲ್ಲೆ, ತಿ. ನರಸೀಪುರದ ಕಾಲೇಜಿನಲ್ಲಿ ಗುರುವಾರದಂದು ಈ ಘಟನೆ ನಡೆದಿದ್ದು, 17 ವರ್ಷದ ನಮಿತಾ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ದ್ವಿತೀಯ ಪಿಯುಸಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು.

ಸ್ನೇಹಿತೆಯರೊಂದಿಗೆ ಫ್ಯಾಶನ್ ಶೋ ಪ್ರದರ್ಶನ ವೇಳೆ ನಮಿತಾ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು. ದಿಢೀರ್ ಸಾವಿಗೆ ಹೃದಯಾಘಾತವೇ ಕಾರಣ ಎಂದು ವೈದ್ಯರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read