ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರಕ್ಕೆ ಆಗಮಿಸಿದ್ದು, ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ.
ತೆರೆದ ಜೀಪ್ ನಲ್ಲಿ ಅವರು ಎರಡು ಗಂಟೆಗಳ ಕಾಲ ಬಂಡೀಪುರ ಅರಣ್ಯದಲ್ಲಿ ಸಂಚರಿಸಿ ಪ್ರಕೃತಿ ಸೌಂದರ್ಯ ಸವಿದಿದ್ದು, ಜೊತೆಗೆ ಕ್ಯಾಮರಾದಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.
ಪ್ರಧಾನಿ ಮೋದಿ ಅವರ ಬಂಡೀಪುರ ಭೇಟಿಯ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.