ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳು ಜಾರಿ ಆಗುತ್ತಿರುವುದು ಜನರ ಕಣ್ಣಿಗೆ ಕಾಣುತ್ತಿದೆ, ಬಿಜೆಪಿಗೆ ಕಣ್ಣಿಗೆ ಕಾಣಿಸುತ್ತಿಲ್ಲ : CM ಸಿದ್ದರಾಮಯ್ಯ ಕಿಡಿ

ಬೆಂಗಳೂರು : ನಮ್ಮ ಪ್ರಣಾಳಿಕೆಯಲ್ಲಿ, ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳೆಲ್ಲಾ ಜಾರಿ ಆಗುತ್ತಿರುವುದು ಜನರ ಕಣ್ಣಿಗೆ ಕಾಣುತ್ತಿದೆ, ಬಿಜೆಪಿ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕಲಬುರ್ಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ₹216.53 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ₹6.20 ಕೋಟಿ ವೆಚ್ಚದ ಬ್ರಾಕಿಥೆರಪಿ ವಿಕೀರಣ ಚಿಕಿತ್ಸೆ ಘಟಕ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದರು.

ಪ್ರತೀ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು, ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಇರಲೇಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಬಡವರಿಗೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವ ಉದ್ದೇಶದಿಂದ ಈ ಘೋಷಣೆ ಮಾಡಿದ್ದು ಒಂದೊಂದೇ ಜಿಲ್ಲೆಯಲ್ಲಿ ಇವೆಲ್ಲವೂ ನೆರವೇರುತ್ತಿವೆ.

ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಏನ್ನುವ ಬಿಜೆಪಿಯವರು ಕಲಬುರ್ಗಿಗೆ ಬಂದು ಕಣ್ಣು ತೆರೆದು ನೋಡಿದರೆ ಅಭಿವೃದ್ಧಿಯ ಮಹಾಪೂರವೇ ಕಾಣಿಸುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಿಯಾಂಕ್ ಖರ್ಗೆ ಅವರು ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಯಾವ ಮಟ್ಟದ ಅಭಿವೃದ್ಧಿ ಮಾಡುತ್ತಿದ್ದಾರೆ ಎನ್ನುವುದನ್ನು ಇಲ್ಲಿಗೆ ಬಂದು ನೋಡಲಿ. ಸರ್ಕಾರ ಘೋಷಿಸಿದ್ದ, ಬಜೆಟ್ ನಲ್ಲಿ ತಿಳಿಸಿದ್ದ ಎಲ್ಲವೂ ಈ ಜಿಲ್ಲೆಯಲ್ಲಿ ಒಂದೊಂದಾಗಿ ಜಾರಿಯಾಗುತ್ತಿವೆ.

ಅಭಿವೃದ್ಧಿಗೆ ನಮ್ಮ ಸರ್ಕಾರದಲ್ಲಿ ಹಣಕ್ಕೆ ಕೊರತೆ ಇಲ್ಲ. ಎಲ್ಲಾ ವರ್ಗದ ಜನರಿಗೆ, ಅವಕಾಶಗಳಿಂದ ವಂಚಿತರಾದ ಜನರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read