ಬಜೆಟ್ ಪೂರ್ವ ಸಿದ್ಧತೆ ಆರಂಭ: ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು ; ಜುಲೈ7ಕ್ಕೆ ಕರ್ನಾಟಕ ಬಜೆಟ್ (Karnataka Budget) ಮಂಡನೆಯಾಗಲಿದೆ. ಜುಲೈ 3ರಿಂದ ರಾಜ್ಯ ಬಜೆಟ್ ಅಧಿವೇಶನ (Budget Session) ಶುರುವಾಗಲಿದೆ.

ಜುಲೈ 7 ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆ ಇಂದಿನಿಂದ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆಗೆ ಬಜೆಟ್ ಪೂರ್ವ ಸಿದ್ಧತೆ ಆರಂಭಿಸಿದ್ದಾರೆ.

ಶಕ್ತಿಭವನದಲ್ಲಿ ಸಿಎಂ ಸಿದ್ದರಾಮಯ್ಯ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದು, ಬಜೆಟ್ ಮಂಡನೆ ಬಗ್ಗೆ ಸಿದ್ದತಾ ಕ್ರಮ ಕೈಗೊಳ್ಳಲಿದ್ದಾರೆ. ಜುಲೈ 3 ರಂದು ಬಜೆಟ್ ಅಧಿವೇಶನ ಪ್ರಾರಂಭ ಆಗಲಿದೆ. 1 ವಾರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು ಜುಲೈ 7 ರಂದು ಬಜೆಟ್ (Karnataka Budget) ಮಂಡಿಸಲಾಗುತ್ತದೆ. ಶುಕ್ರವಾರದಿಂದ ಬಜೆಟ್ ಸಂಬಂಧ ವಿವಿಧ ಹಂತದ ಸಭೆಗಳು ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ಬಹಳ ನಿರೀಕ್ಷೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read