ಬರ್ಮುಡಾ ಧರಿಸಿ ಕಾಟಾಚಾರಕ್ಕೆ ರೇಣುಕಾಚಾರ್ಯ ಜಯಂತಿ ಆಚರಣೆ; ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೇಳಿದ ತಹಶೀಲ್ದಾರ್

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕು ಆಡಳಿತ, ರೇಣುಕಾಚಾರ್ಯ ಜಯಂತಿಯನ್ನು ಆಚರಿಸಿದ್ದು, ಈ ವೇಳೆ ಕೆಲವರು ಬರ್ಮುಡಾ ಧರಿಸಿದ್ದರು. ಇದರಿಂದ ಆಕ್ರೋಶಿತರಾದ ವೀರಶೈವ ಸಮಾಜದ ಮುಖಂಡರು, ಕಾಟಾಚಾರಕ್ಕೆ ರೇಣುಕಾಚಾರ್ಯ ಜಯಂತಿ ಆಚರಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು.

ರೇಣುಕಾಚಾರ್ಯ ಜಯಂತಿ ಆಚರಣೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಮಠದ ಪೀಠಾಧಿಪತಿ ಇದರ ನೇತೃತ್ವ ವಹಿಸಿದ್ದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನನವರ್ ಭೇಟಿ ನೀಡಿದ್ದು, ಪ್ರತಿಭಟನಾಕಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಆಗ ತಮ್ಮ ತಪ್ಪಿನ ಅರಿವಾದ ತಹಶೀಲ್ದಾರ್ ಶ್ರೀಗಳ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದಾರಲ್ಲದೆ ಮತ್ತೊಮ್ಮೆ ಅದ್ದೂರಿಯಾಗಿ ರೇಣುಕಾಚಾರ್ಯ ಜಯಂತಿ ಆಚರಿಸುವುದಾಗಿ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read