ಬಸ್ಸಿನಲ್ಲಿಯೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್….!

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ. ಮಹಿಳಾ ಕಂಡಕ್ಟರ್ ಸುಸೂತ್ರವಾಗಿ ಹೆರಿಗೆ ಮಾಡಿಸಿರುವ ಘಟನೆ ಸೋಮವಾರದಂದು ನಡೆದಿದ್ದು, ಕಂಡಕ್ಟರ್ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಈ ಘಟನೆ ನಡೆದಿದ್ದು, ಈ ಬಸ್ ನಲ್ಲಿ ಬೇಲೂರಿಗೆ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಉದಯಪುರ ಸಮೀಪದ ಕೃಷಿ ಕಾಲೇಜು ಬಳಿ ಹೆರಿಗೆ ನೋವು ಕಾಣಿಸಿಕೊಂಡಿದೆ.

ಆದರೆ ಸಮೀಪದಲ್ಲಿ ಯಾವುದೇ ಆಸ್ಪತ್ರೆ ಇರದಿರುವುದು ಹಾಗೂ ಮಹಿಳೆಗೆ ತುರ್ತು ನೆರವಿನ ಅಗತ್ಯ ಇರುವುದನ್ನು ಮನಗಂಡ ಮಹಿಳಾ ಕಂಡಕ್ಟರ್ ವಸಂತಮ್ಮ, ಬಸ್ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿ ಇತರೆ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

ಬಳಿಕ ಸ್ವತಃ ತಾವೇ ಮುಂದೆ ನಿಂತು ಹೆರಿಗೆ ಮಾಡಿಸಿದ್ದು, ಅಷ್ಟೇ ಅಲ್ಲ ಗರ್ಭಿಣಿ ಮಹಿಳೆ ಆರ್ಥಿಕವಾಗಿ ದುರ್ಬಲವಾಗಿರುವುದನ್ನು ಅರಿತು ಸಿಬ್ಬಂದಿ ಹಾಗೂ ಪ್ರಯಾಣಿಕರಿಂದ 1500 ರೂ. ಸಂಗ್ರಹಿಸಿ ನೀಡಿದ್ದಲ್ಲದೆ ಬಳಿಕ ಬಾಣಂತಿ ಹಾಗೂ ಮಗುವನ್ನು ಆಂಬುಲೆನ್ಸ್ ನೆರವಿನಿಂದ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read