ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಒಂದು ಮಾಹಿತಿ

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ತೀರ್ಥಹಳ್ಳಿ ತಾಲ್ಲೂಕು ಕುಂದಾಪುರ ರಾಜ್ಯ ಹೆದ್ದಾರಿಯ ಈ ಘಾಟ್ ನಲ್ಲಿ ಕಾಂಕ್ರೀಟ್ ಪೇವ್ಮೆಂಟ್ ನಿರ್ಮಿಸುತ್ತಿರುವ ಕಾರಣ ಫೆಬ್ರವರಿ 5 ರಿಂದ ಏಪ್ರಿಲ್ 5 ರವರೆಗೆ ಸಂಚಾರ ನಿಷೇಧಿಸಲಾಗಿದೆ.

ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದು, ರಾಜ್ಯ ಹೆದ್ದಾರಿ 52 ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ತೆರಳುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು ಮೂಲಕ ಕುಂದಾಪುರ ರಸ್ತೆಗೆ ತಲುಪಬಹುದು.

ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ತೆರಳುವ ಭಾರಿ ವಾಹನಗಳು ತೀರ್ಥಹಳ್ಳಿ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗದಲ್ಲಿ ಸಂಚರಿಸಬೇಕಿದೆ.

ಹಾಗೆಯೇ ಶಿವಮೊಗ್ಗ – ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ತೆರಳುವ ಲಘು ಮತ್ತು ಭಾರಿ ವಾಹನಗಳಿಗೂ ಪರ್ಯಾಯ ಮಾರ್ಗ ಸೂಚಿಸಲಾಗಿದ್ದು, ಈ ವಾಹನಗಳು ಹೊಸನಗರ – ನಗರ – ಕೊಲ್ಲೂರು ರಸ್ತೆಯಲ್ಲಿ ಸಂಚರಿಸುವಂತೆ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read