ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಏ.15 ರ ವರೆಗೆ ಸಂಚಾರ ನಿರ್ಬಂಧ ವಿಸ್ತರಣೆ

ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಸಂಚಾರ ನಿರ್ಬಂಧ ಆದೇಶವನ್ನು ಏಪ್ರಿಲ್ 15ರ ವರೆಗೆ ವಿಸ್ತರಿಸಲಾಗಿದೆ.

ಘಾಟ್ ನಲ್ಲಿ ಕಾಂಕ್ರೀಟ್ ಪೇವ್ಮೆಂಟ್ ಕಾಮಗಾರಿ ನಡೆಯುತ್ತಿರುವ ಕಾರಣ ಈ ಮೊದಲು ಏಪ್ರಿಲ್ 5 ರ ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ಕಾಮಗಾರಿ ವ್ಯತ್ಯಯವಾಗಿರುವುದರಿಂದ ನಿರ್ಬಂಧ ಆದೇಶವನ್ನು ಈಗ ವಿಸ್ತರಿಸಲಾಗಿದೆ.

ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗದ ಮೂಲಕ ಸಂಚರಿಸಬಹುದಾಗಿದೆ. ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು ಕುಂದಾಪುರ ರಸ್ತೆಯ ಮೂಲಕ, ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ.

ಹಾಗೆಯೇ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗವಾಗಿ ಸಂಚರಿಸಬಹುದಾಗಿದ್ದು, ತೀರ್ಥಹಳ್ಳಿ – ಯಡೂರು – ಹುಲಿಕಲ್ – ಕುಂದಾಪುರ ಕಡೆಗೆ ಹೋಗುವ ಲಘು ಮತ್ತು ಭಾರಿ ವಾಹನಗಳು ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ – ನಗರ – ಕೊಲ್ಲೂರು – ಕುಂದಾಪುರ ಮಾರ್ಗವಾಗಿ ಹೋಗಬೇಕು ಎಂದು ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read