‘ಬಾಳೆ ಎಲೆ’ಯಲ್ಲಿ ಊಟ ಮಾಡುವುದರಿಂದ ಸಿಗುತ್ತೆ ಈ ಲಾಭ

ಬಾಳೆ ಎಲೆಯಲ್ಲಿ ಊಟ ಕೇವಲ ಮದುವೆ ಸಮಾರಂಭಗಳಲ್ಲಿ ಮಾಡುತ್ತೇವೆ. ಹೆಚ್ಚು ಅಂದರೆ ವಿಶೇಷವಾಗಿ ಹಬ್ಬಗಳಲ್ಲಿ ಬಾಳೆ ಎಲೆ ತಂದು ಊಟ ಮಾಡುತ್ತೇವೆ. ಆದರೆ ದಿನಾ ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ.

* ಬಾಳೆ ಎಲೆಯ ಮೇಲ್ಪದರದ ರಚನೆಯಲ್ಲಿ ಎಪಿಗಾಲ್ಸೊ ಕ್ಯಾಟಿಚಿನ್ ಗ್ಯಾಲೆಟ್ ಎಂಬ ಪಾಲಿ ಫೀನಾಲ್ ಅಂಶ ಇರುವುದರಿಂದ ಬಿಸಿ ಆಹಾರ ಎಲೆಗೆ ಬಿದ್ದಾಕ್ಷಣ ಇವು ಆಹಾರದೊಂದಿಗೆ ಬೆರೆತು ನಮ್ಮ ಹೊಟ್ಟೆ ಸೇರುತ್ತವೆ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ.

* ಬಾಳೆ ಎಲೆಯ ಮೇಲೆ ಬ್ಯಾಕ್ಟೀರಿಯಾಗಳು ಬಾಳುವುದಿಲ್ಲ. ಇದರಲ್ಲಿ ಏನೇ ಆಹಾರ ಬಡಿಸಿದರೂ ಹೊಟ್ಟೆಗೆ ಹೋಗುವ ಮುನ್ನವೇ ಕೊಲ್ಲಲ್ಪಡುತ್ತವೆ. ಅದರಲ್ಲೂ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ರಾಸಾಯನಿಕಗಳನ್ನು ಸಹ ದೇಹ ಸೇರಲು ಬಿಡುವುದಿಲ್ಲ.

* ಸಣ್ಣ ವಯಸ್ಸಿನಲ್ಲಿಯೇ ಬಿಳಿ ಕೂದಲಿನ ಸಮಸ್ಯೆಯಿದ್ದವರು ನಿತ್ಯ ಬಾಳೆ ಎಲೆಯಲ್ಲಿ ಊಟ ಮಾಡಿದರೆ ಒಳ್ಳೆಯ ಫಲಿತಾಂಶ ಸಿಗುತ್ತದೆ.

* ಬಾಳೆ ಎಲೆ ಊಟ ಆರೋಗ್ಯಕ್ಕೆ ತಂಪು. ಹಾಗೆ ಚರ್ಮರೋಗಗಳು ಬಾರದಂತೆ ತಡೆಯುತ್ತದೆ.

* ಯಾವುದಾದರೂ ಸುಟ್ಟ ಗಾಯಗಳಿಗೆ ಶುಂಠಿ ಎಣ್ಣೆಯಲ್ಲಿ ಅದ್ದಿದ ಬಾಳೆ ಎಲೆಯನ್ನು ಹಾಕಿ ಕಟ್ಟು ಹಾಕಿದರೆ ಅಥವಾ ಮುಚ್ಚಿದರೆ ಸುಟ್ಟ ಗಾಯ ಶಮನಗೊಳ್ಳುತ್ತದೆ.

* ಸೊಳ್ಳೆ ಕಚ್ಚಿ ಮಕ್ಕಳ ತ್ವಚೆಯಲ್ಲಿ ಗುಳ್ಳೆಗಳು ಉಂಟಾದರೆ ಕುಡಿ ಬಾಳೆ ಎಲೆ ರಸ, ಆಲೀವ್ ಎಣ್ಣೆ, ಸ್ವಲ್ಪ ಮೇಣ ಮಿಶ್ರಮಾಡಿ ಗುಳ್ಳೆಗಳ ಮೇಲೆ ಹಚ್ಚಿದರೆ ಗುಳ್ಳೆಗಳು ಮಾಯವಾಗುತ್ತವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read