ಬಿಜೆಪಿಯಲ್ಲಿ ಯಡಿಯೂರಪ್ಪರನ್ನು ಕಡೆಗಣಿಸಿಲ್ಲ; ಬಿ.ವೈ. ವಿಜಯೇಂದ್ರ ಹೇಳಿಕೆ

ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕಡೆಗಣಿಸಲಾಗುತ್ತಿದೆ ಎಂಬ ಪ್ರತಿ ಪಕ್ಷಗಳ ನಾಯಕರ ಹೇಳಿಕೆಯನ್ನು ತಳ್ಳಿ ಹಾಕಿರುವ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿಯಲ್ಲಿ ಯಡಿಯೂರಪ್ಪ ಈಗಲೂ ಒಂದು ದೊಡ್ಡ ಶಕ್ತಿ ಎಂದು ಪ್ರತಿಪಾದಿಸಿದ್ದಾರೆ.

ಕಲಬುರಗಿ ತಾಲೂಕಿನ ಹಗರಗಾ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪನವರು ಒಂದು ಆಸ್ತಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಲವು ಬಾರಿ ನನ್ನ ಬಳಿ ಹೇಳಿದ್ದಾರೆ ಎಂದು ತಿಳಿಸಿದರು.

ಇನ್ನು ಬಿಜೆಪಿಯನ್ನು ಬ್ರೋಕರ್ ಪಾರ್ಟಿ ಎಂದು ಹೇಳಿರುವ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿದ ವಿಜಯೇಂದ್ರ, ಈ ಹೇಳಿಕೆ ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read