ಬಿಜೆಪಿ ಅಭ್ಯರ್ಥಿ ಕಣದಲ್ಲಿದ್ದರೂ ಸರ್ವೋದಯ ಪಕ್ಷಕ್ಕೆ ಸುಮಲತಾ ಬೆಂಬಲ ? ಅಚ್ಚರಿ ಮೂಡಿಸಿದ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಮುಖ ನಾಯಕರು ಸಹ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ರೋಡ್ ಶೋ, ಸಾರ್ವಜನಿಕ ಸಭೆಗಳನ್ನು ನಡೆಸುತ್ತಿದ್ದಾರೆ.

ಮಂಡ್ಯ ಕ್ಷೇತ್ರದ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್, ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು, ಆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಇದರ ಮಧ್ಯೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಸರ್ವೋದಯ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದರ್ಶನ್ ಪುಟ್ಟಣ್ಣಯ್ಯ ನೀಡಿರುವ ಹೇಳಿಕೆ ಒಂದು ಈಗ ಅಚ್ಚರಿ ಮೂಡಿಸಿದೆ.

ಮೇಲುಕೋಟೆ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್, ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಿದ್ದು, ಇದರ ಮಧ್ಯೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ದರ್ಶನ್ ಪುಟ್ಟಣ್ಣಯ್ಯ, ಮೇಲುಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿದಿದ್ದರೂ ಸಹ ಸುಮಲತಾ ನನಗೆ ಬೆಂಬಲ ನೀಡಿದ್ದಾರೆ ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಸುಮಲತಾ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read