HomeKarnatakaಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದ ವೇಳೆ ಸಚಿವ ಬಿ.ಸಿ. ಪಾಟೀಲ್ ಅಚ್ಚರಿಯ ಘೋಷಣೆ....!

ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದ ವೇಳೆ ಸಚಿವ ಬಿ.ಸಿ. ಪಾಟೀಲ್ ಅಚ್ಚರಿಯ ಘೋಷಣೆ….!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ಇದರ ಮಧ್ಯೆ ಈ ಬಾರಿಯೂ ಹಿರೇಕೆರೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿರುವ ಸಚಿವ ಬಿ.ಸಿ. ಪಾಟೀಲ್ ಅಚ್ಚರಿಯ ಘೋಷಣೆಯೊಂದನ್ನು ಮಾಡಿದ್ದಾರೆ.

ಗುರುವಾರದಂದು ಹಿರೇಕೆರೂರು ಪಟ್ಟಣದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ತೀರ್ಮಾನ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.

2028ರ ಚುನಾವಣೆಯಲ್ಲಿ ನಾನು ಸ್ಪರ್ಧಿಸದಿರಲು ತೀರ್ಮಾನಿಸಿದ್ದು, ಹೀಗಾಗಿ ಈ ಚುನಾವಣೆಯಲ್ಲಿ ನನಗೆ ಮತ್ತೆ ಆಶೀರ್ವಾದ ಮಾಡಬೇಕು ಎಂದು ಮತದಾರರಲ್ಲಿ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಳಿಕ ನಡೆದ ಉಪ ಚುನಾವಣೆಯಲ್ಲೂ ತಮ್ಮನ್ನು ಆಯ್ಕೆ ಮಾಡಿದ ಮತದಾರರನ್ನು ಬಿ.ಸಿ. ಪಾಟೀಲ್ ಸ್ಮರಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular