HomeEntertainmentಬಿಡುಗಡೆಯಾಯ್ತು 'ಗಣ' ಚಿತ್ರದ ಫಸ್ಟ್ ಲುಕ್

ಬಿಡುಗಡೆಯಾಯ್ತು ‘ಗಣ’ ಚಿತ್ರದ ಫಸ್ಟ್ ಲುಕ್

ಒಂದರ ಮೇಲೊಂದು ಸಿನಿಮಾಗಳಲ್ಲಿ ಬಿಜಿಯಾಗಿರುವ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಗಣ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ನಿನ್ನೆ ಬಿಡುಗಡೆ ಮಾಡಲಾಗಿದ್ದು ಪ್ರಜ್ವಲ್ ದೇವರಾಜ್ ಮತ್ತೊಮ್ಮೆ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಹರಿಪ್ರಸಾದ್ ಜಕ್ಕ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಸೇರಿದಂತೆ ಬಹುಭಾಷಾ ನಟಿ ವೇದಿಕ, ಕೃಷಿ ತಾಪಂಡ, ವಿಶಾಲ್ ಹೆಗ್ಡೆ, ಶಿವರಾಜ್ ಕೆ ಆರ್ ಪೇಟೆ  ತೆರೆ ಹಂಚಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದು, ಚೆರ್ರಿ ಕ್ರಿಯೇಷನ್ಸ್ ಬ್ಯಾನರ್ ನಡಿ ಪಾರ್ತು ಬಂಡವಾಳ ಹೂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಿನಿಮಾಗಾಗಿ ಪ್ರಜ್ವಲ್ ದೇವರಾಜ್ ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ ಎಂದು ನಿರ್ದೇಶಕರು ಇತ್ತೀಚಿಗಷ್ಟೇ ವಾಹಿನಿಯಲ್ಲಿ ಹಂಚಿಕೊಂಡಿದ್ದರು ಪ್ರಜ್ವಲ್ ದೇವರಾಜ್ ಅವರನ್ನು ಮತ್ತೊಮ್ಮೆ ತೆರೆ ಮೇಲೆ ವೀಕ್ಷಿಸಲು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular