HomeKarnatakaಬಿ.ವೈ. ವಿಜಯೇಂದ್ರ ನಾಮಪತ್ರ ಸಲ್ಲಿಕೆ; ಮೆರವಣಿಗೆಯಲ್ಲಿ ಹರಿದುಬಂದ ಜನಸಾಗರ

ಬಿ.ವೈ. ವಿಜಯೇಂದ್ರ ನಾಮಪತ್ರ ಸಲ್ಲಿಕೆ; ಮೆರವಣಿಗೆಯಲ್ಲಿ ಹರಿದುಬಂದ ಜನಸಾಗರ

ಶಿವಮೊಗ್ಗ: ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಇಂದು ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಭಾರೀ ಜನಸಾಗರದೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.

ಉಮೇದುವಾರಿಕೆೆ ಸಲ್ಲಿಕೆಗೂ ಮೊದಲು ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಜೊತೆಗೆ ರಾಯರ ಮಠಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಂಸದ ಹಾಗೂ ಸಹೋದರ ಬಿ.ವೈ. ರಾಘವೇಂದ್ರ ಮೊದಲಾದವರು ಇದ್ದರು.

ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಂಟಿಬಿ ನಾಗರಾಜ್, ಕೇಂದ್ರ ಸಚಿವ ನಾರಾಯಣಸ್ವಾಮಿ, ನಟಿ ಶ್ರುತಿ, ರಾಜೀವ್, ಶಾಸಕ ಎಸ್. ರುದ್ರೇಗೌಡ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮೊದಲಾದವರು ಭಾಗಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆರವಣಿಗೆ ಉದ್ದಕ್ಕೂ ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ನೆರೆದಿದ್ದರು. ಮೆರವಣಿಗೆ ಉದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಪರ ಘೋಷಣೆ ಕೂಗಿದರು. ದೇಶಕ್ಕೆ ನರೇಂದ್ರ, ರಾಜ್ಯಕ್ಕೆ ವಿಜಯೇಂದ್ರ ಎಂಬ ಘೋಷಣೆ ಮುಗಿಲು ಮುಟ್ಟಿತ್ತು.

For Latest News Updates, Join Our Whatsapp Community🚩
RELATED ARTICLES

Most Popular