HomeKarnatakaಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಕಾಮುಕ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಕಾಮುಕ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಹನುಮಂತ ಮಾಗುಂಡಪ್ಪ ಹುಲಸಗೇರಿ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿ. ಬಾಗಲಕೋಟೆ ಜಿಲ್ಲೆಯ ಬಾದಾಮಿಯ ನಂದಿಕೇಶ್ವರ ಗ್ರಾಮದ ಈತ 2019ರ ಮೇ 17ರಂದು ಬುದ್ಧಿಮಾಂದ್ಯ ಮಹಿಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆ ಮನೆಗೆ ನುಗ್ಗಿ ಅತ್ಯಾಚಾರವೆಸಗಿ, ಮನೆಯಲ್ಲಿದ್ದ ಮೊಬೈಲ್ ಕದ್ದು ಪರಾರಿಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಸಂತ್ರಸ್ತ ಮಹಿಳೆ ಮೇಲೆ ಹಲ್ಲಿನಿಂದ ಕಚ್ಚಿದ ಗುರುತು ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ಆರೋಪಿ ಗುರುತು ಪತ್ತೆ ಮಾಡಿದ್ದರು.

ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ ಬಾಗಲಕೋಟೆ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 42 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular