HomeKarnatakaಬೆಂಗಳೂರಿನಲ್ಲಿಂದು ಪ್ರಧಾನಿ ಮೋದಿ ರೋಡ್ ಶೋ; ನಗರದಾದ್ಯಂತ ಖಾಕಿ ಸರ್ಪಗಾವಲು

ಬೆಂಗಳೂರಿನಲ್ಲಿಂದು ಪ್ರಧಾನಿ ಮೋದಿ ರೋಡ್ ಶೋ; ನಗರದಾದ್ಯಂತ ಖಾಕಿ ಸರ್ಪಗಾವಲು

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.

ಮಾಗಡಿ ರಸ್ತೆಯ ನೈಸ್ ಜಂಕ್ಷನ್ ನಿಂದ ಸುಮನವಳ್ಳಿ ಸರ್ಕಲ್ ವರೆಗೆ ಒಟ್ಟು ಆರು ಕಿಲೋಮೀಟರ್ ವರೆಗೆ ರೋಡ್ ಶೋ ನಡೆಯಲಿದ್ದು, ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರತೆಗಾಗಿ 2600 ಪೊಲೀಸರನ್ನು ನಿಯೋಜಿಸಲಾಗಿದ್ದು ಉಸ್ತುವಾರಿಯನ್ನು ಉನ್ನತ ಅಧಿಕಾರಿಗಳಿಗೆ ವಹಿಸಲಾಗಿದೆ. ರೋಡ್ ಶೋ ಸಾಗಲಿರುವ ಇಕ್ಕೆಲ ರಸ್ತೆಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ಅಲ್ಲದೆ ವಾಹನ ಸವಾರರಿಗೆ ಹಲವು ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular