HomeKarnatakaಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ; ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ; ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ

Safe Driving Tips | How To Drive Safely on The Road | AIG Ireland

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಹಿಂದೆ ಹಲವು ಹಿಟ್ ಅಂಡ್ ರನ್ ಪ್ರಕರಣಗಳು ನಡೆದಿದ್ದು, ಇದೀಗ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಫೆಬ್ರವರಿ 2ರಂದು ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣಗೆರೆ ಮೆಟ್ರೋ ಸ್ಟೇಷನ್ ಕೆಳಗೆ ಮಧ್ಯಾಹ್ನ 1:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕೆಂಪು ಬಣ್ಣದ ಕಾರು ಆಕೆಗೆ ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಚಾಲಕ ಕಾರು ನಿಲ್ಲಿಸದೆ ಅಲ್ಲಿಂದ ಹೋಗಿದ್ದಾನೆ. ಈ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಗಾಯಗೊಂಡಿದ್ದ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ಕಾರು ಚಾಲಕನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular