ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್; ಮಾರ್ಚ್ 23ರಿಂದ ಆರಂಭವಾಗಲಿದೆ ಸಿನಿಮಾ ಹಬ್ಬ

14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 23ರಿಂದ 30 ರ ವರೆಗೆ ಇದು ನಡೆಯಲಿದೆ. ಈ ಸಂದರ್ಭದಲ್ಲಿ ರಾಜಾಜಿನಗರದಲ್ಲಿರುವ ಒರಿಯನ್ ಮಾಲ್ ನ 11 ಸ್ಕ್ರೀನ್ ಗಳಲ್ಲಿ 55 ದೇಶದ ಸಿನಿಮಾಗಳು ಸೇರಿದಂತೆ ಒಟ್ಟು 300 ಚಿತ್ರ ಪ್ರದರ್ಶನವಾಗುವ ಸಾಧ್ಯತೆ ಇದೆ.

ಬುಧವಾರದಂದು ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಲನಚಿತ್ರೋತ್ಸವ ಸಂಘಟನಾ ಸಮಿತಿ ಅಧ್ಯಕ್ಷರೂ ಆದ ಸಚಿವ ಆರ್. ಅಶೋಕ್ ಈ ಕುರಿತಂತೆ ಮಾಹಿತಿ ನೀಡಿದ್ದು, ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಚಲನಚಿತ್ರೋತ್ಸವ ಸಂದರ್ಭದಲ್ಲಿ ಪ್ರಥಮ ಪ್ರಶಸ್ತಿಯಾಗಿ 3 ಲಕ್ಷ ರೂಪಾಯಿ, ದ್ವಿತೀಯ 2 ಲಕ್ಷ ರೂಪಾಯಿ ಹಾಗೂ ತೃತೀಯ 1 ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತಿದ್ದು, ಇದನ್ನು ಹೆಚ್ಚಳ ಮಾಡುವಂತೆ ಸಲಹೆ ನೀಡಲಾಗಿದೆ. ಜೊತೆಗೆ ಪ್ರಶಸ್ತಿ ವಿಜೇತ ಚಿತ್ರಗಳನ್ನು ಆಯ್ಕೆ ಮಾಡಲು ಅರ್ಹ, ಸಮರ್ಥರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read