ಬೆಳಗಾವಿ ಸುವರ್ಣಸೌಧದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲಾಗುವುದೇ ಎಂಬ ಪ್ರಶ್ನೆಗೆ ಹೀಗಿತ್ತು ಸಭಾಧ್ಯಕ್ಷರ ಉತ್ತರ….!

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಳವಡಿಸಿರುವ ವೀರ ಸಾವರ್ಕರ್ ಭಾವಚಿತ್ರ ಈ ಹಿಂದೆ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಅಂದಿನ ಪ್ರತಿಪಕ್ಷ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿತ್ತು.

ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಬುಧವಾರದಂದು ನಡೆದ ಪತ್ರಿಕಾಗೋಷ್ಠಿ ವೇಳೆ ಮಾಧ್ಯಮ ಪ್ರತಿನಿಧಿಗಳು, ಬೆಳಗಾವಿಯ ಸುವರ್ಣಸೌಧದಲ್ಲಿರುವ ಸಾವರ್ಕರ್ ಅವರ ಭಾವಚಿತ್ರ ತೆರವುಗೊಳಿಸಲಾಗುತ್ತದೆಯೇ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿದ ಯು.ಟಿ. ಖಾದರ್, ಈ ಹಿಂದಿನ ಘಟನಾವಳಿಗಳು, ಬೆಳವಣಿಗೆಯನ್ನು ಕೆದಕಲು ಹೋಗುವುದಿಲ್ಲ. ಯಾರ ಭಾವಚಿತ್ರ ಇರಬೇಕು, ತೆಗೆಯಬೇಕು ಎಂಬುದು ಮುಖ್ಯವಾಗುವುದಿಲ್ಲ ಎಂದರಲ್ಲದೆ, ಈಗಿರುವ ರೀತಿಯಲ್ಲಿ ಮುಂದುವರಿದುಕೊಂಡು ಹೋಗುತ್ತದೆ. ಫೋಟೋದಂತಹ ವಿಚಾರ ಶಿಕ್ಷಣ, ಅನ್ನ, ಉದ್ಯೋಗ ನೀಡುವುದಿಲ್ಲ. ಹೀಗಾಗಿ ಈ ಕುರಿತ ಚರ್ಚೆ ಅಪ್ರಸ್ತುತ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read