HomeKarnatakaಬೈಕ್ ಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು; ಭೀಕರ ಅಪಘಾತದ ದೃಶ್ಯ...

ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು; ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ರಾಯಚೂರು: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯರಿಗೆ ಡಿಕ್ಕಿ ಹೊಡೆದಿರುವ ಘಟನೆ ರಾಯಚೂರಿನ ರಾಘವೇಂದ್ರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಶಿವರಾಜ್ ಪಾಟೀಲ್ ಹಾಗೂ ವಿದ್ಯಾರ್ಥಿನಿಯರಾದ ಜ್ಯೋತಿ, ಶಿವಮಂಗಳ ಗಾಯಗೊಂಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ನಿಂದ ಬೈಕ್ ಸವಾರ ಬೈಕ್ ತಿರುಗಿಸುತ್ತಿದ್ದ ಈ ವೇಳೆ ರೈಲ್ವೆ ನಿಲ್ದಾಣ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಯರಿಗೂ ಗುದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಟವಶಾತ್ ಬೈಕ್ ಸವಾರ ಹಾಗೂ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಾರನ್ನು ವಶಕ್ಕೆ ಪಡೆದಿರುವ ರಾಯಚೂರು ಸಂಚಾರಿ ವಿಭಾಗದ ಪೊಲೀಸರು ಚಾಲಕನ ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular