
ವಕೀಲ ಸುಧೀರ್ ಕುಮಾರ್ ಓಜಾ ಎಂಬವರು ಬಿಹಾರದ ಮುಜಾಫರ್ ಪುರ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಭಾನುವಾರದಂದು ಮುಂಬೈನಲ್ಲಿ ನಡೆದ ಸಂತ ರವಿ ದಾಸ್ ಜನ್ಮ ದಿನಾಚರಣೆ ಸಂದರ್ಭದಲ್ಲಿ ಮೋಹನ್ ಭಾಗವತ್, ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಮಾರಂಭದಲ್ಲಿ ಭಾಷಣ ಮಾಡುವಾಗ ಮೋಹನ್ ಭಾಗವತ್ ಜಾತಿ ವ್ಯವಸ್ಥೆ ಕುರಿತಂತೆ ಪ್ರಸ್ತಾಪಿಸಿದ್ದು, ಹಿಂದೂ ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಜಾತಿ ಪದ್ಧತಿ ದೇವರು ಸೃಷ್ಟಿಸಿದ್ದಲ್ಲ. ಇದು ಪುರೋಹಿತ ವರ್ಗದ ಸೃಷ್ಟಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು ಫೆಬ್ರವರಿ 20 ಕ್ಕೆ ವಿಚಾರಣೆ ನಿಗದಿಯಾಗಿದೆ.

