HomeAgricultureಭದ್ರಾ ಡ್ಯಾಂ ನಿಂದ ನದಿಗೆ ನೀರು; ನದಿ ಪಾತ್ರದಲ್ಲಿ ತಿರುಗಾಟಕ್ಕೆ ನಿಷೇಧ

ಭದ್ರಾ ಡ್ಯಾಂ ನಿಂದ ನದಿಗೆ ನೀರು; ನದಿ ಪಾತ್ರದಲ್ಲಿ ತಿರುಗಾಟಕ್ಕೆ ನಿಷೇಧ

ಬೇಸಿಗೆ ಸಂದರ್ಭದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣ ಜೊತೆಗೆ ನದಿ ಅಕ್ಕಪಕ್ಕದಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲು ಆದೇಶಿಸಲಾಗಿದೆ.

ಒಂದು ಟಿಎಂಸಿ ನೀರನ್ನು ಏಪ್ರಿಲ್ 27ರ ಸಂಜೆ 6 ಗಂಟೆಯಿಂದ ಮೇ 9 ರ ಬೆಳಗ್ಗೆ 6 ಗಂಟೆವರೆಗೆ ಪ್ರತಿ ದಿನ ಸಾವಿರ ಕ್ಯೂಸೆಕ್ ನಂತೆ ಒಟ್ಟು 11,574 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತದೆ.

ಈ ಅವಧಿಯಲ್ಲಿ ಸಾರ್ವಜನಿಕರು, ರೈತರು ನದಿ ಪಾತ್ರದಲ್ಲಿ ತಿರುಗಾಡುವುದು, ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದನ್ನು ನಿಷೇಧಿಸಲಾಗಿದ್ದು, ಜೊತೆಗೆ ನದಿ ದಂಡೆಯಲ್ಲಿ ಪಂಪ್ಸೆಟ್ ಅಳವಡಿಸುವುದನ್ನು ಸಹ ನಿರ್ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular