ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ನೀಡಲು ಜೆಡಿಯು ನಾಯಕನ ಒತ್ತಾಯ

ಭಾರತೀಯ ಸೇನೆಯಲ್ಲಿ ಮುಸ್ಲಿಂ ಯುವಕರಿಗೆ ಶೇಕಡ 30ರಷ್ಟು ಮೀಸಲಾತಿ ನೀಡಬೇಕು ಎಂದು ಬಿಹಾರದ ಜೆಡಿಯು ಮುಖಂಡ ಗುಲಾಮ್ ರಸೂಲ್ ಬಲ್ಯಾವಿ ಒತ್ತಾಯಿಸಿದ್ದಾರೆ. ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಸೈನಿಕರ ಹೆಸರಿನಲ್ಲಿ ಬಿಜೆಪಿ ತನ್ನ ಅಪರಾಧಗಳನ್ನು ಮುಚ್ಚಿಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸೈನಿಕರ ಶೌರ್ಯ ಮತ್ತು ಧೈರ್ಯದ ಲಾಭವನ್ನು ಪಡೆದುಕೊಳ್ಳಲು ಯತ್ನಿಸುವ ಬಿಜೆಪಿ, ಅದರ ಮೇಲೆಯೇ ರಾಜಕೀಯ ಮಾಡುತ್ತಿದೆ. ಹುತಾತ್ಮ ಯೋಧರ ಸಾವಿನಲ್ಲೂ ಬಿಜೆಪಿ ಸರ್ಕಾರ ಮತ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read