ಭಾರತ – ಆಸ್ಟ್ರೇಲಿಯಾ ಫೈನಲ್‌ ಪಂದ್ಯದಲ್ಲಿ ಯಾರಿಗೊಲಿಯಲಿದೆ ಗೆಲುವು ? ಇಲ್ಲಿದೆ ಜ್ಯೋತಿಷಿಗಳು ನುಡಿದಿರುವ ಭವಿಷ್ಯ….!

ವಿಶ್ವಕಪ್‌ ಫೈನಲ್‌ ಪಂದ್ಯಕ್ಕಾಗಿ ಇಡೀ ಜಗತ್ತು ಕಾತರದಿಂದ ಕಾಯುತ್ತಿದೆ. ನವೆಂಬರ್ 19ರ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ  ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ.

ಇದುವರೆಗೆ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದಿದೆ. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಭಾರತ ಫೈನಲ್‌ಗೇರಿದೆ. ಆರಂಭದಲ್ಲಿ ಆಸ್ಟ್ರೇಲಿಯಾ ಎರಡು ಪಂದ್ಯಗಳಲ್ಲಿ ಸೋಲಿನ ರುಚಿ ಕಂಡಿದ್ದರೂ ನಂತರ  ಹಿಂತಿರುಗಿ ನೋಡಲಿಲ್ಲ.

ಫೈನಲ್‌ನಲ್ಲಿ ಗೆದ್ದು ಯಾರು ವಿಶ್ವಕಪ್‌ ಟ್ರೋಫಿ ಎತ್ತಿಹಿಡಿಯುತ್ತಾರೆ ಅನ್ನೋದು ಸದ್ಯದ ಕುತೂಹಲ. ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಬಗ್ಗೆ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ.

ಜ್ಯೋತಿಷಿಗಳ ಪ್ರಕಾರ ಆಸ್ಟ್ರೇಲಿಯಾ ವಿರುದ್ಧ ಭಾರತ ಮೇಲುಗೈ ಸಾಧಿಸಲಿದೆ. ಭಾರತ ಐಸಿಸಿ ವಿಶ್ವಕಪ್ 2023ರ ಟ್ರೋಫಿಯನ್ನು ಗೆಲ್ಲುವ ಎಲ್ಲಾ ಸಾಧ್ಯತೆಗಳಿವೆ. ಭಾರತದ ಜಾತಕವು ಪ್ರಸ್ತುತ ಆಸ್ಟ್ರೇಲಿಯಾಕ್ಕಿಂತ ಉತ್ತಮವಾಗಿದೆ ಮತ್ತು ಬಲವಾಗಿದೆ. ಇದು ಪಂದ್ಯದ ದಿನದಂದು ಎದುರಾಳಿಗಳನ್ನು ಸೋಲಿಸಲು ಭಾರತೀಯ ಆಟಗಾರರಿಗೆ ಉತ್ಸಾಹ, ಶಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯನ್ನು ಒದಗಿಸುತ್ತದೆ.

ರೋಹಿತ್ ಶರ್ಮಾ ಜಾತಕ ಕೂಡ ಚೆನ್ನಾಗಿದೆ ಎನ್ನುತ್ತಾರೆ ಜ್ಯೋತಿಷಿಗಳು. ಇದು ಅವರ ನಾಯಕತ್ವದ ಕೌಶಲ್ಯಕ್ಕೆ ಸಹಾಯ ಮಾಡಿದೆ. ರೋಹಿತ್ ಅವರ ಗ್ರಹಗಳ ಸ್ಥಾನಗಳು, 2011ರ ವಿಶ್ವಕಪ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಅವರಂತೆಯೇ ಇದೆ. ಜಾತಕಗಳ ಸೂಚನೆಯ ಪ್ರಕಾರ ರೋಹಿತ್‌ ಶರ್ಮಾ ಈ ಬಾರಿ ಟ್ರೋಫಿ ಎತ್ತಲಿದ್ದಾರೆ.

ಜ್ಯೋತಿಷಿಗಳು ಹೇಳುವ ಪ್ರಕಾರ ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ಅವರ ಜಾತಕದಲ್ಲಿ ಯುರೇನಸ್, ಶುಕ್ರ ಮತ್ತು ನೆಪ್ಚೂನ್ ಪ್ರಬಲವಾಗಿವೆ. ಇದು ಅವರು ಪ್ರಾಬಲ್ಯ ಸಾಧಿಸಲು ಸಿದ್ಧರಾಗಿದ್ದಾರೆ ಎಂದು ಸೂಚಿಸುತ್ತದೆ. ಹಾಗಾಗಿ ಭಾನುವಾರದ  ಪಂದ್ಯ ಇತಿಹಾಸ ಸೃಷ್ಟಿಸಬಹುದು. ಆದಾಗ್ಯೂ ಭಾರತದ ಎಂಟನೇ ಮನೆಯಲ್ಲಿ ಮಂಗಳನ ಉಪಸ್ಥಿತಿಯಿದ್ದು, ಭಾರತೀಯ ಆಟಗಾರರು ತಮ್ಮ ಸಾಮರ್ಥ್ಯದ ಮೇಲೆ ಗಮನ ಕೇಂದ್ರೀಕರಿಸಬೇಕು. ಅತಿಯಾದ ಆತ್ಮವಿಶ್ವಾಸ ಬೇಡ ಎಂದು ಜ್ಯೋತಿಷಿಗಳು ಎಚ್ಚರಿಸಿದ್ದಾರೆ. ಜ್ಯೋತಿಷಿಗಳು ಹೇಳುವ ಪ್ರಕಾರ ಆಸ್ಟ್ರೇಲಿಯಾ ತಂಡದಲ್ಲಿ ಪ್ಯಾಟ್ ಕಮ್ಮಿನ್ಸ್ ಅವರ ಜಾತಕವು ಚೆನ್ನಾಗಿದೆಯಂತೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read