ಭಾರತ-ಪಾಕಿಸ್ತಾನ ಕದನ ವಿರಾಮ ದೃಢಪಡಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ: ಪ್ರಧಾನಿ ಮೋದಿ ‘ಬುದ್ಧಿವಂತಿಕೆ’ಗೆ ಶ್ಲಾಘನೆ

ವಾಷಿಂಗ್ಟನ್ ಡಿಸಿ(ಯುಎಸ್): ಮಹತ್ವದ ರಾಜತಾಂತ್ರಿಕ ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಮತ್ತು ತಟಸ್ಥ ಸ್ಥಳದಲ್ಲಿ ಸಮಗ್ರ ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ದೃಢಪಡಿಸಿದ್ದಾರೆ.

ಕಳೆದ 48 ಗಂಟೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶೆಹಬಾಜ್ ಷರೀಫ್ ಸೇರಿದಂತೆ ಹಿರಿಯ ಭಾರತ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ತಾವು ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನಿಕಟ ಸಂಪರ್ಕದಲ್ಲಿದ್ದೇವೆ ಎಂದು ರುಬಿಯೊ ಹೇಳಿದರು.

ಸಂಘರ್ಷದ ನಡುವೆ ಸಂವಾದವನ್ನು ಆಯ್ಕೆ ಮಾಡಿಕೊಳ್ಳುವಲ್ಲಿ “ಬುದ್ಧಿವಂತಿಕೆ, ವಿವೇಕ ಮತ್ತು ರಾಜತಾಂತ್ರಿಕತೆ”ಯನ್ನು ಪ್ರದರ್ಶಿಸಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಷರೀಫ್ ಅವರ ನಾಯಕತ್ವವನ್ನು ಅವರು ಶ್ಲಾಘಿಸಿದ್ದಾರೆ.

“ಕಳೆದ 48 ಗಂಟೆಗಳಲ್ಲಿ, @VP ವ್ಯಾನ್ಸ್ ಮತ್ತು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಶೆಹಬಾಜ್ ಷರೀಫ್, ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ” ಎಂದು ರುಬಿಯೊ ಮಾಹಿತಿ ನೀಡಿದ್ದಾರೆ.

ಶಾಂತಿಯ ಮಾರ್ಗವನ್ನು ಆಯ್ಕೆ ಮಾಡುವಲ್ಲಿ ಪ್ರಧಾನಿ ಮೋದಿ ಮತ್ತು ಷರೀಫ್ ಅವರ ಬುದ್ಧಿವಂತಿಕೆ, ವಿವೇಕ ಮತ್ತು ರಾಜತಾಂತ್ರಿಕತೆಯನ್ನು ನಾವು ಶ್ಲಾಘಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಭಾರತ ಮತ್ತು ಪಾಕಿಸ್ತಾನ “ಪೂರ್ಣ ಮತ್ತು ತಕ್ಷಣದ ಕದನ ವಿರಾಮ”ಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದರು.

ಅಮೆರಿಕದ ಮಧ್ಯಸ್ಥಿಕೆ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿಕೊಂಡ ಟ್ರಂಪ್, ಬಿಕ್ಕಟ್ಟನ್ನು ಶಮನಗೊಳಿಸಲು “ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ”ಯನ್ನು ಆಯ್ಕೆ ಮಾಡಿದ್ದಕ್ಕಾಗಿ ಎರಡೂ ದೇಶಗಳ ನಾಯಕತ್ವವನ್ನು ಶ್ಲಾಘಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read