HomeKarnatakaಮಂಡ್ಯದಿಂದಲೂ ಕಣಕ್ಕಿಳಿಯಲಿದ್ದಾರಾ HDK ? ಕುತೂಹಲ ಸೃಷ್ಟಿಸಿದ ಬ್ಯಾಂಕ್ ಖಾತೆ

ಮಂಡ್ಯದಿಂದಲೂ ಕಣಕ್ಕಿಳಿಯಲಿದ್ದಾರಾ HDK ? ಕುತೂಹಲ ಸೃಷ್ಟಿಸಿದ ಬ್ಯಾಂಕ್ ಖಾತೆ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾವು ರಾಮನಗರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದ್ದು, ಇದರ ಮಧ್ಯೆ ಅವರು ಮಂಡ್ಯ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿದ್ದಾರಾ ಎಂಬ ಕುತೂಹಲ ಮನೆ ಮಾಡಿದೆ.

ಇದಕ್ಕೆ ಕಾರಣವಾಗಿರುವುದು ಕುಮಾರಸ್ವಾಮಿಯವರು ಇತ್ತೀಚೆಗೆ ಮಂಡ್ಯದ ಎಚ್ ಡಿ ಎಫ್ ಸಿ ಬ್ಯಾಂಕ್ ನಲ್ಲಿ ಖಾತೆ ತೆರೆದಿರುವುದು. ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಬೇಕೆಂದರೆ ಆ ಜಿಲ್ಲೆಯ ಬ್ಯಾಂಕ್ ನಲ್ಲಿ ಖಾತೆ ಹೊಂದಿರಬೇಕಾಗುತ್ತದೆ ಎಂದು ಹೇಳಲಾಗಿದೆ. ಹೀಗಾಗಿ ಕುಮಾರಸ್ವಾಮಿ ಮಂಡ್ಯದಲ್ಲಿ ಬ್ಯಾಂಕ್ ಖಾತೆ ತೆರೆದಿರಬಹುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಬೆಂಗಳೂರಿನಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಮಂಡ್ಯದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡ ಇರುವುದು ನಿಜ. ಆದರೆ ನಾನು ರಾಮನಗರ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಇದರ ಮಧ್ಯೆಯೂ ಕುಮಾರಸ್ವಾಮಿಯವರ ಮಂಡ್ಯ ಸ್ಪರ್ಧೆ ಕುರಿತು ಊಹಾಪೋಹಗಳು ಕೇಳಿ ಬರುತ್ತಿದ್ದು, ಕೊನೆಗಳಿಗೆಯಲ್ಲಿ ಮಂಡ್ಯದಿಂದ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಬಹುದು ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular