
ಇಂತಹದೊಂದು ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು, 26 ವರ್ಷದ ಮಹದೇವಸ್ವಾಮಿ ಬಂಧಿತ ಯುವಕನಾಗಿದ್ದಾನೆ. ಈತ ಗುಂಡ್ಲುಪೇಟೆ ತಾಲೂಕಿನ ಗ್ರಾಮದವನಾಗಿದ್ದು ಮದುವೆಯ ಬಳಿಕ ಬೇಗೂರಿನಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ.
17 ವರ್ಷ 2 ತಿಂಗಳು ವಯಸ್ಸಿನ ಬಾಲಕಿ ಗರ್ಭಿಣಿಯಾದ ಬಳಿಕ ಆಕೆಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು ತಾಯಿ – ಮಗು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.

