ಮತದಾನ ಮಾಡಲು ಬರುವವರಿಗೆ ಅನುಕೂಲವಾಗುವಂತೆ ವಿಶೇಷ ರೈಲು

ಮೈಸೂರು ಹಾಗೂ ಕಾರವಾರದಲ್ಲಿರುವ ಶಿವಮೊಗ್ಗ ಕ್ಷೇತ್ರದ ಮತದಾರರು ಮೇ 7 ರಂದು ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ರೈಲನ್ನು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಬಿಜೆಪಿ ಮುಖಂಡ ಎಸ್. ದತ್ತಾತ್ರಿ ತಿಳಿಸಿದ್ದಾರೆ.

ಮೇ 6 ರಂದು ರಾತ್ರಿ 9.30ಕ್ಕೆ ಮೈಸೂರು ಬಿಡುವ ವಿಶೇಷ ರೈಲು ಮರುದಿನ ಬೆಳಗ್ಗೆ 9 ಗಂಟೆಗೆ ತಾಳಗುಪ್ಪಗೆ ತಲುಪಲಿದೆ. ಮೇ 7 ರಂದು ಸಂಜೆ 6.30ಕ್ಕೆ ತಾಳಗುಪ್ಪದಿಂದ ಹೊರಟು ಮರುದಿನ ಮುಂಜಾನೆ 4 ಗಂಟೆಗೆ ಮೈಸೂರು ತಲುಪಲಿದೆ.

ಹಾಗೆಯೇ ಮೇ 6 ರಂದು ರಾತ್ರಿ 8.15ಕ್ಕೆ ಮೈಸೂರಿನಿಂದ ಹೊರಡುವ ರೈಲು ಮೇ 7 ರಂದು ಮಧ್ಯಾಹ್ನ 1 ಗಂಟೆಗೆ ಕಾರವಾರ ತಲುಪಲಿದೆ. ಅದೇ ದಿನ 10 ಗಂಟೆಗೆ ಕಾರವಾರದಿಂದ ಹೊರಟು ಮರುದಿನ ಸಂಜೆ 6.25ಕ್ಕೆ ಮೈಸೂರು ತಲುಪಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read