HomeKarnatakaಮತದಾರರ ಅಂತಿಮ ಪಟ್ಟಿ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಮತದಾರರ ಅಂತಿಮ ಪಟ್ಟಿ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಗುರುವಾರದಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು ಕೆಲವೊಂದು ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ.

6,50,532 ಮತದಾರರನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ ಶೃಂಗೇರಿ 1,66,521 ಮತದಾರರೊಂದಿಗೆ ಅತಿ ಕಡಿಮೆ ಮತದಾರರನ್ನು ಹೊಂದಿರುವ ಕ್ಷೇತ್ರ ಎಂಬ ಹೆಗ್ಗಳಿಕೆ ಹೊಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಈಗ ಪ್ರಕಟಗೊಂಡಿರುವ 221 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 5,05,48,553 ಮತದಾರರಿದ್ದು, ಈ ಪೈಕಿ 2,54,49,725 ಪುರುಷರು, 2,50,94,326 ಮಹಿಳೆಯರು ಹಾಗೂ 4,502 ಇತರ ಮತದಾರರಾಗಿದ್ದಾರೆ.

224 ಕ್ಷೇತ್ರಗಳ ಪೈಕಿ ಈಗ 221 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟಗೊಂಡಿದ್ದು, ಮೂರು ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ಮತದಾರರ ಪಟ್ಟಿಯು ಜನವರಿ 15 ಕ್ಕೆ ಪ್ರಕಟವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular