HomeKarnatakaಮತ್ತೆ ಜೆಡಿಎಸ್ ಸೇರ್ಪಡೆಗೆ ಮುಂದಾದ ಮಾಜಿ ಶಾಸಕ; HDK ಜೊತೆ ಖೂಬಾ ಚರ್ಚೆ

ಮತ್ತೆ ಜೆಡಿಎಸ್ ಸೇರ್ಪಡೆಗೆ ಮುಂದಾದ ಮಾಜಿ ಶಾಸಕ; HDK ಜೊತೆ ಖೂಬಾ ಚರ್ಚೆ

ವಿಧಾನಸಭಾ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲವಾದರೂ ಈಗಾಗಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ಕೆಲ ಶಾಸಕರುಗಳು ಸಹ ತಮ್ಮ ಪಕ್ಷ ತೊರೆದು ಮತ್ತೊಂದು ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಚುನಾವಣೆ ದಿನಾಂಕ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ.

ಇದರ ಮಧ್ಯೆ ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಗೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಮಲ್ಲಿಕಾರ್ಜುನ ಖೂಬಾ, ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದು ಪರಾಭವಗೊಂಡಿದ್ದರು. ನಂತರ 2019ರಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಅವರು ಬಿಜೆಪಿಯಿಂದ ಮತ್ತೆ ಕಣಕ್ಕಿಳಿಯಲು ಬಯಸಿದ್ದರಾದರೂ ಸಹ ಟಿಕೆಟ್ ಕೈತಪ್ಪಿತ್ತು. ಜೊತೆಗೆ ಬಿಜೆಪಿಯಲ್ಲಿ ತಮಗೆ ಸೂಕ್ತ ಸ್ಥಾನಮಾನ ನೀಡಿಲ್ಲವೆಂಬ ಅಸಮಾಧಾನವೂ ಅವರಿಗಿದೆ. ಹೀಗಾಗಿ ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular