HomeBusinessಮತ್ತೊಮ್ಮೆ ಏಷ್ಯಾದ 'ನಂಬರ್ 1' ಶ್ರೀಮಂತರಾಗಿ ಹೊರಹೊಮ್ಮಿದ ಮುಕೇಶ್ ಅಂಬಾನಿ

ಮತ್ತೊಮ್ಮೆ ಏಷ್ಯಾದ ‘ನಂಬರ್ 1’ ಶ್ರೀಮಂತರಾಗಿ ಹೊರಹೊಮ್ಮಿದ ಮುಕೇಶ್ ಅಂಬಾನಿ

ಭಾರತದ ಅತಿ ಸಿರಿವಂತ ಎಂಬ ಹೆಗ್ಗಳಿಕೆ ಹೊಂದಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಏಷ್ಯಾದ ನಂಬರ್ 1 ಶ್ರೀಮಂತ ಎಂಬ ಪಟ್ಟ ಅಲಂಕರಿಸಿದ್ದಾರೆ. ಫೋರ್ಬ್ಸ್ ಮ್ಯಾಗಝೀನ್ ಮಂಗಳವಾರದಂದು ಬಿಡುಗಡೆ ಮಾಡಿದ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಈ ಮಾಹಿತಿ ನೀಡಲಾಗಿದೆ.

ಮುಕೇಶ್ ಅಂಬಾನಿ 6.83 ಲಕ್ಷ ಕೋಟಿ ರೂಪಾಯಿ ಆಸ್ತಿ ಹೊಂದಿದ್ದು, ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಅದಾನಿ ಸಮೂಹ ಸಂಸ್ಥೆಗಳ ಮಾಲೀಕ ಗೌತಮ್ ಅದಾನಿ ಈಗ 24ನೇ ಸ್ಥಾನಕ್ಕೆ ಕುಸಿದಿದ್ದಾರೆ. ಗೌತಮ್ ಅದಾನಿ ಅವರ ಆಸ್ತಿ ಮೌಲ್ಯ 3.87 ಲಕ್ಷ ಕೋಟಿ ರೂಪಾಯಿಗಳಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಭಾರತದ ಅತಿ ಸಿರಿವಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಮೊದಲ ಸ್ಥಾನದಲ್ಲಿದ್ದು, ಗೌತಮ್ ಅದಾನಿ ಎರಡನೇ ಸ್ಥಾನದಲ್ಲಿದ್ದಾರೆ. 2 ಲಕ್ಷ ಕೋಟಿ ರೂಪಾಯಿ ಆಸ್ತಿ ಮೌಲ್ಯದೊಂದಿಗೆ ಶಿವನಾಡರ್ ಮೂರನೇ ಹಾಗೂ 1.8 ಲಕ್ಷ ಕೋಟಿ ರೂಪಾಯಿ ಆಸ್ತಿಯೊಂದಿಗೆ ಸೈರಸ್ ಪೂನಾವಾಲ ನಾಲ್ಕನೇ ಸ್ಥಾನದಲ್ಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular