ಮಧುಮೇಹ ನಿಯಂತ್ರಿಸುವ ʼಮಾವಿನ ಎಲೆʼ

ಮಾವಿನ ಎಲೆಗಳ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳು - Saaksha TVಮಾವಿನ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಾತ್ರವಲ್ಲ, ಶುಭ ಸಮಾರಂಭದ ವೇಳೆ ತೋರಣ ಕಟ್ಟಲು ಬಳಸುವ ಅದರ ಎಲೆಯಲ್ಲಿಯೂ ಕೂಡ ಆರೋಗ್ಯ ಸಮಸ್ಯೆಗೆ ಪರಿಹಾರ ಅಡಗಿದೆ. ಮಧುಮೇಹ ಸಮಸ್ಯೆಗೆ ಇದು ರಾಮಾಬಾಣ ಅಂತಲೇ ಹೇಳಬಹುದು. ಈ ಎಲೆಗಳಿಂದ ಹೇಗೆ ಪ್ರಯೋಜನ ಪಡೆದುಕೊಳ್ಳ ಬಹುದು ಅಂತ ನೀವೂ ತಿಳಿಯಿರಿ.

* 10 ರಿಂದ 15 ಮಾವಿನ ಎಲೆಗಳನ್ನು ತೆಗೆದುಕೊಂಡು ಸ್ವಚ್ಚ ಮಾಡಿ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ರಾತ್ರಿಯಿಡಿ ಅದೇ ನೀರಿನಲ್ಲಿ ಎಲೆಗಳನ್ನು ಬಿಡಿ. ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಎಲೆಗಳನ್ನು ತೆಗೆದು ಆ ನೀರಿನ್ನು ಕುಡಿಯಿರಿ. ಎರಡು ಅಥವಾ ಮೂರು ತಿಂಗಳ ಕಾಲ ಈ ರೀತಿ ಮಾಡಿದರೆ ಮಧುಮೇಹ ನಿಯತ್ರಣದಲ್ಲಿರುತ್ತದೆ.

* ಮಾವಿನ ಎಲೆಗಳನ್ನು ಸೂರ್ಯನ ಬಿಸಿಲಿನಲ್ಲಿ ಒಣಗಿಸಿ. ನಂತರ ಅದನ್ನು ಪುಡಿ ಮಾಡಿ. ಪ್ರತಿದಿನ ಒಂದು ಚಮಚ ಈ ಪುಡಿಯನ್ನು ಸೇವನೆ ಮಾಡುವುದರಿಂದ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತದೆ.

* ಮಾವುಗಳ ಎಲೆಯ ಚಹಾ ಕುಡಿದರೆ ಜ್ವರ, ಭೇದಿ, ನಿದ್ರಾಹೀನತೆ, ಉಬ್ಬಿರುವ ರಕ್ತನಾಳಗಳು, ಅಸ್ತಮಾ, ಗಂಟಲೂತ ಮತ್ತು ಶೀತಗಳಂತಹ ಹಲವಾರು ಆರೋಗ್ಯ ಸಮಸ್ಯೆಗಳು ದೂರವಾಗುತ್ತದೆ. ಈ ಎಲೆಗಳು ರಕ್ತದ ಒತ್ತಡ ಕಡಿಮೆ ಮಾಡಿ ರಕ್ತನಾಳಗಳನ್ನು ಬಲಪಡಿಸುವಲ್ಲಿ ಸಹಾಯ ಮಾಡುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read