HomeKarnatakaಮಳೆ ಅಬ್ಬರ: ಹಾವೇರಿ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ; ಮನೆ ಕುಸಿದು ಬಿದ್ದು ಒಂದು ವರ್ಷದ...

ಮಳೆ ಅಬ್ಬರ: ಹಾವೇರಿ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ; ಮನೆ ಕುಸಿದು ಬಿದ್ದು ಒಂದು ವರ್ಷದ ಕಂದಮ್ಮ ಸಾವು

ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಹಾವೇರಿಯಲ್ಲಿ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದ್ದು, ನಿರಂತರ ಮಳೆಯಿಂದಾಗಿ ಮನೆ ಕುಸಿದು ಬಿದ್ದು, ಒಂದು ವರ್ಷದ ಕಂದಮ್ಮ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ.

ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದಾಗಿ ಮನೆ ಸಂಪೂರ್ಣ ಹಾನಿಯಾಗಿತ್ತು. ಇದೀಗ ಮನೆ ಏಕಾಏಕಿ ಕುಸಿದು ಬಿದ್ದಿದ್ದು, ದುರಂತದಲ್ಲಿ ಒಂದು ವರ್ಷದ ಮಗು ಸ್ಫೂರ್ತಿ ಸಾವನ್ನಪ್ಪಿದ್ದಾಳೆ. ಸ್ಫೂರ್ತಿಯ ತಂದೆ ಕೆಂಚಪ್ಪಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲೇಬೆನ್ನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular