HomeLatest News'ಮಹಿಳಾ ದಿನಾಚರಣೆ' ಪ್ರಯುಕ್ತ ಸರ್ಕಾರದಿಂದಲೇ ಕ್ರಿಕೆಟ್ ಟೂರ್ನಿ ಆಯೋಜನೆ

‘ಮಹಿಳಾ ದಿನಾಚರಣೆ’ ಪ್ರಯುಕ್ತ ಸರ್ಕಾರದಿಂದಲೇ ಕ್ರಿಕೆಟ್ ಟೂರ್ನಿ ಆಯೋಜನೆ

ಮಾರ್ಚ್ 8ರಂದು ನಡೆಯುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಜಿಲ್ಲಾ, ತಾಲೂಕು ಪಂಚಾಯಿತಿ ಮಟ್ಟದಲ್ಲಿ 19 ವರ್ಷದೊಳಗಿನ ಹೆಣ್ಣು ಮಕ್ಕಳ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಈ ಕುರಿತಂತೆ ಈಗಾಗಲೇ ಪಂಚಾಯತ್ ರಾಜ್ ಆಯುಕ್ತಾಲಯದಿಂದ ನಿರ್ದೇಶನ ನೀಡಲಾಗಿದೆ.

ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಈ ಕುರಿತಂತೆ ಸೂಚನೆ ನೀಡಲಾಗಿದ್ದು, ಕ್ರಿಕೆಟ್ ಪಂದ್ಯಾವಳಿ ನಡೆಯುವ ಕುರಿತಂತೆ ವ್ಯಾಪಕ ಪ್ರಚಾರ ನಡೆಸಬೇಕು. ಮಹಿಳಾ ಸಂಘ ಹಾಗೂ ಯುವತಿ ಮಂಡಳಿಗಳಿಗೆ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ.

ಅಲ್ಲದೆ ಪದ್ಯಾವಳಿ ನಡೆಸುವ ಸಲುವಾಗಿ ಜಿಲ್ಲೆ ಹಾಗೂ ತಾಲೂಕಿನಲ್ಲಿ ಕ್ರೀಡಾಂಗಣಗಳನ್ನು ಗುರುತಿಸಬೇಕು. ಸೂಕ್ತ ಸಿದ್ಧತೆ ಮಾಡಿಕೊಂಡ ಬಳಿಕ ಟೂರ್ನಿಯಲ್ಲಿ ಭಾಗವಹಿಸುವ ಮಹಿಳಾ ತಂಡಗಳಿಗೆ ಟ್ರ್ಯಾಕ್ ಸೂಟ್ ನೀಡಬೇಕು. ಜೊತೆಗೆ ಶುದ್ಧ ಕುಡಿಯುವ ನೀರು, ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular