ಮಾಂಗಲ್ಯ ಧಾರಣೆ ಬಳಿಕ ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ತಮ್ಮ ಮದುವೆಗೆ ಉಭಯ ಕುಟುಂಬಗಳ ಸದಸ್ಯರು ಒಪ್ಪಲಿಲ್ಲವೆಂಬ ಕಾರಣಕ್ಕೆ ಯುವ ಪ್ರೇಮಿಗಳಿಬ್ಬರು ಮಾಂಗಲ್ಯ ಧಾರಣೆ ಮಾಡಿಕೊಂಡ ಬಳಿಕ ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಬಸವನಬಾಗೇವಾಡಿ ತಾಲೂಕಿನ ಜೈನಾಪುರ ಗ್ರಾಮದ ಹೊಲವೊಂದರಲ್ಲಿ 21 ವರ್ಷದ ರಾಕೇಶ್ ಹಂಗರಗಿ ಹಾಗೂ 18 ವರ್ಷದ ಸಾವಿತ್ರಿ ಅಂಬಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರೂ ಜೈನಾಪುರ ಗ್ರಾಮದ ವಾಸಿಗಳಾಗಿದ್ದು, ಪರಸ್ಪರ ಪ್ರೀತಿ ಮಾಡುತ್ತಿದ್ದರು.

ಆದರೆ ಎರಡೂ ಕುಟುಂಬಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಿಂದ ಹತಾಶರಾದ ಇಬ್ಬರೂ ಸಮೀಪದ ಹೊಲಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಕೇಶ್, ಸಾವಿತ್ರಿಗೆ ಮಾಂಗಲ್ಯ ಧಾರಣೆ ಮಾಡಿದ ಬಳಿಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read