ಮಾಜಿ ಶಾಸಕರ ಮನೆ ದರೋಡೆ: ಮತ್ತೆ ನಾಲ್ವರ ಅರೆಸ್ಟ್

ಮಾಜಿ ಶಾಸಕ ಎಸ್.ಎಂ. ನಾಗರಾಜ್ ಅವರ ಮನೆಯಲ್ಲಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದು, ಇವರಿಗೆ ಒಟ್ಟು 11 ಮಂದಿ ಬಂಧನಕ್ಕೊಳಗಾದಂತಾಗಿದೆ.

ಮೇ 6 ರಂದು ಸುಮಾರು 15 ಮಂದಿ ಇದ್ದ ತಂಡ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಿರಗನಹಳ್ಳಿಯಲ್ಲಿರುವ ಮಾಜಿ ಶಾಸಕ ನಾಗರಾಜ್ ಅವರ ತೋಟದ ಮನೆಯಲ್ಲಿ ದರೋಡೆ ನಡೆಸಿದ್ದು, ಈ ವೇಳೆ ನಾಗರಾಜ್ ಅವರ ಮೇಲೆ ಹಲ್ಲೆ ಮಾಡಿ 963 ಗ್ರಾಂ ಚಿನ್ನ ಹಾಗೂ 61,000 ನಗದು ದೋಚಿ ಪರಾರಿಯಾಗಿದ್ದರು.

ಆ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ಇದ್ದ ಕಾರಣ ಮಾಜಿ ಶಾಸಕರ ಮನೆಯಲ್ಲಿ ಕೋಟಿಗಟ್ಟಲೆ ಹಣ ಇರಬಹುದು ಎಂಬ ಕಾರಣಕ್ಕೆ ಈ ದರೋಡೆ ಮಾಡಲಾಗಿತ್ತು ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದರು. ಇದೀಗ ಮತ್ತೆ ನಾಲ್ಕು ಮಂದಿಯನ್ನು ಬಂಧಿಸಿ ಅವರ ಬಳಿ ಇದ್ದ 27 ಗ್ರಾಂ ತೂಕದ ಎರಡು ಚಿನ್ನದ ಬಳೆಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮಹೇಂದ್ರ ಕಾರನ್ನು ವಶಕ್ಕೆ ಪಡೆಯಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read