HomeKarnatakaಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಆಫರ್; 2 ಎಕರೆ ಮಾರಿ ಕೋಟಿ ರೂಪಾಯಿ ನೀಡುವುದಾಗಿ ಹೇಳಿದ...

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಆಫರ್; 2 ಎಕರೆ ಮಾರಿ ಕೋಟಿ ರೂಪಾಯಿ ನೀಡುವುದಾಗಿ ಹೇಳಿದ ರೈತ…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಘೋಷಿಸಿದ್ದು, ಆದರೂ ಸಹ ಅವರ ಅಭಿಮಾನಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಮಾಡುತ್ತಿರುವುದು ತಪ್ಪಿಲ್ಲ.

ಈ ಹಿಂದೆ ಯಾದಗಿರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಜಿಲ್ಲೆಯ ಯಾವುದಾದರೊಂದು ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕಿಳಿದರೆ ತಾವು ಒಂದು ಕೋಟಿ ರೂಪಾಯಿ ನೀಡುವುದಲ್ಲದೆ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಂಡು 50 ರಿಂದ 60 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದಾದ ಬಳಿಕ ಮತ್ತೊಂದು ಆಫರ್ ನೀಡಿದ್ದ ರಾಯಚೂರಿನ ವ್ಯಕ್ತಿ, ತಮ್ಮ ಎರಡು ಎಕರೆ ಹೊಲ ಮಾರಾಟ ಮಾಡಿ ಅವರಿಗೆ ಚುನಾವಣಾ ವೆಚ್ಚಕ್ಕಾಗಿ ದೇಣಿಗೆ ನೀಡುವುದಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು. ಅದಾದ ಬಳಿಕ ಚಿಕ್ಕಮಗಳೂರು ಅಭಿಮಾನಿಯಿಂದ ಕೋಟಿ ರೂಪಾಯಿ ನೀಡುವ ಆಫರ್ ಬಂದಿತ್ತು.

ಇದೀಗ ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ಕೆ.ಎಸ್. ಮಲಿಯಪ್ಪ ಎಂಬವರು ಹೊಸ ಆಫರ್ ನೀಡಿದ್ದು, ಹೊಸಪೇಟೆಯಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ತಮ್ಮ ಬಳಿ ಇರುವ ಎರಡು ಎಕರೆ ಹೊಲ ಮಾರಾಟ ಮಾಡಿ ಒಂದು ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular