HomeKarnatakaಮಾಡಾಳ್ ವಿರೂಪಾಕ್ಷಪ್ಪನವರಿಗೆ ಮತ್ತೊಂದು ಶಾಕ್; ಮೋದಿ ಕರ್ನಾಟಕ ಭೇಟಿಗೂ ಮುನ್ನವೇ ಬಿಜೆಪಿಯಿಂದ ಉಚ್ಛಾಟನೆಗೆ ಚಿಂತನೆ

ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮತ್ತೊಂದು ಶಾಕ್; ಮೋದಿ ಕರ್ನಾಟಕ ಭೇಟಿಗೂ ಮುನ್ನವೇ ಬಿಜೆಪಿಯಿಂದ ಉಚ್ಛಾಟನೆಗೆ ಚಿಂತನೆ

ತಮ್ಮ ಪುತ್ರ ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಕಾರಣ ಬಂಧನ ಭೀತಿ ಎದುರಿಸುತ್ತಿರುವ ದಾವಣಗೆರೆ ಜಿಲ್ಲೆ, ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ತಮ್ಮ ವಕೀಲರ ಮುಖಾಂತರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಇದರ ಮಧ್ಯೆ ವಿರೂಪಾಕ್ಷಪ್ಪನವರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನಡೆದಿರುವ ಈ ಘಟನೆಯಿಂದ ತೀವ್ರ ಮುಜುಗರಕ್ಕೆ ಒಳಗಾಗಿರುವ ಬಿಜೆಪಿ, ವಿರೂಪಾಕ್ಷಪ್ಪನವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸುವುದರ ಜೊತೆಗೆ ವಿಧಾನಸಭಾ ಚುನಾವಣೆಯಲ್ಲಿ ಅವರ ಕುಟುಂಬದ ಯಾವುದೇ ಸದಸ್ಯರಿಗೆ ಟಿಕೆಟ್ ನೀಡದಿರಲು ತೀರ್ಮಾನಕೈಗೊಂಡಿದೆ ಎನ್ನಲಾಗಿದೆ.

ವಿರೂಪಾಕ್ಷಪ್ಪನವರ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ದಿನನಿತ್ಯ ಟೀಕೆ ಮಾಡುತ್ತಿರುವುದರ ಜೊತೆಗೆ ಮಾರ್ಚ್ 9 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವುದು ಸಹ ಬಿಜೆಪಿ ನಾಯಕರಿಗೆ ಇರುಸುಮುರುಸು ತಂದಿದೆ. ಅಲ್ಲದೆ ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲಿ ವಿರೂಪಾಕ್ಷಪ್ಪನವರ ಪ್ರಕರಣವನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್, ಭ್ರಷ್ಟಾಚಾರಕ್ಕೆ ಉತ್ತರ ನೀಡುವಂತೆ ಪ್ರಧಾನಿ ಅವರನ್ನು ಕೇಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗಾಗಿ ಅದಕ್ಕೂ ಮುನ್ನವೇ ವಿರೂಪಾಕ್ಷಪ್ಪನವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ, ಭ್ರಷ್ಟಾಚಾರಿಗಳಿಗೆ ನಾವು ಅವಕಾಶ ನೀಡುವುದಿಲ್ಲ ಎಂಬ ಸಂದೇಶ ಸಾರುವುದು ಬಿಜೆಪಿ ನಾಯಕರ ಉದ್ದೇಶವಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular