HomeKarnatakaಮಾನಸಿಕ ಖಿನ್ನತೆ; ದುಡುಕಿನ ನಿರ್ಧಾರ ಕೈಗೊಂಡ ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ

ಮಾನಸಿಕ ಖಿನ್ನತೆ; ದುಡುಕಿನ ನಿರ್ಧಾರ ಕೈಗೊಂಡ ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಿಕ್ಷಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯ ನಿವಾಸಿ ಜ್ಯೋತಿ (40) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. 12 ವರ್ಷಗಳ ಕಾಲ ಬನವತಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಕಳೆದ 9 ತಿಂಗಳ ಹಿಂದಷ್ಟೇ ತುರುವಿನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಸೇವೆ ಸಲ್ಲಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮತ್ತೊಂದು ಶಾಲೆಗೆ ವರ್ಗಾವಣೆಗೆ ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ.

ವಿವಾಹವಾಗಿ 13 ವರ್ಷಗಳಾದರೂ ಮಕ್ಕಳಿರಲಿಲ್ಲ. ಇದರಿಂದ ತೀವ್ರವಾಗಿ ನೊಂದಿದ್ದ ಶಿಕ್ಷಕಿ ಜ್ಯೋತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಖಿನ್ನತೆಯಿಂದ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular