HomeKarnatakaಮಾರ್ಚ್ 12ರಂದು ರಾಜ್ಯಕ್ಕೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಾರ್ಚ್ 12ರಂದು ರಾಜ್ಯಕ್ಕೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಹಿಡಿಯಬೇಕೆಂಬ ಕಾರಣಕ್ಕೆ ಬಿಜೆಪಿ ನಾಯಕರು ನಿರಂತರವಾಗಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಇತ್ತೀಚೆಗಷ್ಟೇ ಕರ್ನಾಟಕಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ನೂತನ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸಿ ಬಳಿಕ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಅಲ್ಲದೆ ಅಂದೇ ಬೆಳಗಾವಿಗೂ ತೆರಳಿ ರೋಡ್ ಶೋ ನಡೆಸುವುದರ ಜೊತೆಗೆ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈಗ ಮಾರ್ಚ್ 12ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಬೆಂಗಳೂರು – ಮೈಸೂರು ಹೆದ್ದಾರಿಗೆ ಚಾಲನೆ ನೀಡಲಿದ್ದಾರೆ. ಎಸ್ ಪಿ ಜಿ ಅನುಮತಿಸಿದರೆ ಅಂದು ಸುಮಾರು ಎರಡು ಕಿಲೋಮೀಟರ್ ದೂರ ರೋಡ್ ಶೋ ಮಾಡುವ ಉದ್ದೇಶವನ್ನು ಹೊಂದಿರುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular