ಮೀನುಗಾರರ ಶ್ರೇಯೋಭಿವೃದ್ದಿಯೇ ನಮ್ಮ ಗುರಿ: ಪ್ರಧಾನಿ ಮೋದಿ

ಕಾರವಾರ : ಮೀನುಗಾರರ ಶ್ರೇಯೋಭಿವೃದ್ದಿ ನಮ್ಮ ಗುರಿಯಾಗಿದೆ. ಮೀನುಗಾರರ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ( BJP) ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದು, ಸಮಾವೇಶದಲ್ಲಿ ಮಾತನಾಡಿದ ಅವರು, ನಮಗೆ ರಿಮೋಟ್ ಕಂಟ್ರೋಲ್ ಇಲ್ಲ. ನನಗೆ ನೀವೆ ರಿಮೋರ್ಟ್ ಕಂಟ್ರೋಲ್ ಎಂದು ಹೇಳಿದ್ದಾರೆ.

ನನಗೆ 140 ಕೋಟಿ ಜನರೇ ರಿಮೋಟ್ ಕಂಟ್ರೋಲರ್ ( Remote Controller) ಆಗಿದ್ದು, ನನಗೆ ಬೇರೆ ಯಾರು ಕೂಡ ಕಂಟ್ರೋಲರ್ ಇಲ್ಲ ಅಂತ ಹೇಳಿದ್ದಾರೆ.

ಕರ್ನಾಟಕವನ್ನು ಸಮಗ್ರ ಅಭಿವೃದ್ದಿಗೊಳಿಸುವುದೇ ನನ್ನ ಗುರಿ, ರಾಜ್ಯದ ಅಭಿವೃದ್ದಿಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಜಾರಿಗೆ ತಂದಿದೆ ಎಂದರು.

ಮೀನುಗಾರರ ಶ್ರೇಯೋಭಿವೃದ್ದಿ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ನ ಸುಳ್ಳು ಗ್ಯಾರೆಂಟಿಗಳಿಗೆ ಮರುಳಾಗಬೇಡಿ ಎಂದು ಪ್ರಧಾನಿ ಮೋದಿ ಹೇಳಿದರು. ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಅಭ್ಯರ್ಥಿಗಳಾದ ವಿಶ್ವೇಶ್ವರ್ ಹೆಗಡೆ ಕಾಗೇರಿ, ರೂಪಾಲಿ ನಾಯ್ಕ ಮತ್ತಿತರರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read