ಮುಂದಿನ ಸರ್ಕಾರ ರಚನೆ ಕುರಿತಂತೆ ಕೋಡಿಮಠದ ಶ್ರೀಗಳಿಂದ ಮಹತ್ವದ ‘ಭವಿಷ್ಯ’

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರ್ನಾಲ್ಕು ತಿಂಗಳುಗಳ ಕಾಲವಿದ್ದು, ಆದರೆ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಈಗಾಗಲೇ ಆರಂಭವಾಗಿದೆ. ಅಲ್ಲದೆ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಅಧಿಕಾರ ಸಿಗಲಿದೆಯಾ ಅಥವಾ ಕಳೆದ ಬಾರಿಯಂತೆ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆಯಾ ಎಂಬ ಕುತೂಹಲ ಮನೆ ಮಾಡಿದೆ.

ಇದರ ಮಧ್ಯೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಮುಂದಿನ ಸರ್ಕಾರ ರಚನೆ ಕುರಿತಂತೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ಒಂದೇ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಶುಕ್ರವಾರದಂದು ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಸಾಮಾನ್ಯ. ಪಕ್ಷಗಳೂ ಇಬ್ಭಾಗವಾಗುವ ಲಕ್ಷಣವಿದೆ. ಆದರೆ ಇದರ ಮಧ್ಯೆಯೂ ಒಂದೇ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು. ಅಲ್ಲದೆ ಮುಂದಿನ ಮೂರು ವರ್ಷ ಎಷ್ಟು ಸುಖವಿದೆಯೋ ಅಷ್ಟೇ ಕಷ್ಟವಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read