‘ಮುಕ್ತಿ ಬಾವುಟ’ 10 ಲಕ್ಷ ರೂಪಾಯಿಗಳಿಗೆ ಹರಾಜು

ದಕ್ಷಿಣ ಕಾಶಿ ಎಂದೇ ಖ್ಯಾತಿ ಹೊಂದಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಶ್ರೀ ತೇರು ಮಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿದೆ.

ಈ ಸಂದರ್ಭದಲ್ಲಿ ಶ್ರೀ ಸ್ವಾಮಿಯ ಮುಕ್ತಿ ಬಾವುಟವನ್ನು ಹರಾಜು ಹಾಕಲಾಗಿದ್ದು, ಡಿಶ್ ಮಂಜುನಾಥ್ ಹಾಗೂ ಮಾಜಿ ಸಚಿವ ಡಿ. ಸುಧಾಕರ್ ನಡುವೆ ನಡೆದ ಪೈಪೋಟಿಯಲ್ಲಿ ಅಂತಿಮವಾಗಿ ಸುಧಾಕರ್ 10 ಲಕ್ಷ ರೂಪಾಯಿಗಳಿಗೆ ಮುಕ್ತಿ ಬಾವುಟ ಪಡೆದುಕೊಂಡಿದ್ದಾರೆ.

ಕಳೆದ ಆರು ವರ್ಷಗಳಿಂದ ರಥೋತ್ಸವದ ದಿನದಂದು ಶ್ರೀ ಸ್ವಾಮಿಯ ಮುಕ್ತಿ ಬಾವುಟವನ್ನು ಹರಾಜು ಹಾಕಲಾಗುತ್ತಿದ್ದು, 2018ರಲ್ಲಿ ವೀರೇಂದ್ರ ಪಪ್ಪಿ ಎಂಬವರು ಬರೋಬ್ಬರಿ 31 ಲಕ್ಷ ರೂಪಾಯಿಗಳಿಗೆ ಇದನ್ನು ಪಡೆದುಕೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read