ದಾವಣಗೆರೆ: ಪ್ರಸಕ್ತ ಸಾಲಿನ ಮುಕ್ತ ನಿಧಿ ಅನುದಾನದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ನಿಗಧಿತ ನಮೂನೆಯ ಅರ್ಜಿಯನ್ನು ಕಚೇರಿಯಲ್ಲ್ಲಿ ಅಥವಾ ವೆಬ್ ಸೈಟ್ ವಿಳಾಸ : www.hariharcity.mrc.gov.in ಮೂಲಕ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 8 ರೊಳಗಾಗಿ ಕುಂದು ಕೊರತೆ ವಿಭಾಗ ನಗರಸಭೆ ಕಾರ್ಯಾಲಯ ಹರಿಹರ ರವರಿಗೆ ನಿಗಧಿತ ದಾಖಲೆಗಳೊಂದಿಗೆ ಖುದ್ದಾಗಿ ಸಲ್ಲಿಸಬೇಕೆಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.