BIG NEWS: ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಮಹೇಶ್ ಚಂದ್ರ ಗುರು ಇನ್ನಿಲ್ಲ

ಮೈಸೂರು: ನಿವೃತ್ತ ಪ್ರಾಧ್ಯಾಪಕ ಮಹೇಶ್ ಚಂದ್ರ ಗುರು ಹೃದಯಘಾತದಿಂದ ನಿಧನಮೈಸೂರು ಮಾನಸಗಂಗೋತ್ರಿಯ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಮಹೇಶ್ ಚಂದ್ರ ಗುರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಚಂದ್ರ ಗುರು ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಹೃದಯಾಘಾತದಿಂದ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿಚಾರವಾದಿಗಳು ಹಾಗೂ ಖ್ಯಾತ ವಾಗ್ಮಿಯೂ ಆಗಿದ್ದ ಮಹೇಶ್ ಚಂದ್ರ ಗುರು ಅವರು 80ರ ದಶಕದಲ್ಲಿ ಹೈದರಾಬಾದ್ ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ನಂತರ ಮಂಗಳೂರು ವಿವಿಯಲ್ಲಿ ಪತ್ರಿಕೋದ್ಯಮ ಪ್ರಾಧ್ಯಾಪಕರಾಗಿ ಸೇವೆ ಆರಂಭಿಸಿದ ಅವರು ಬಳಿಕ ಮೈಸೂರು ವಿವಿಗೆ ವರ್ಗಾವಣೆಗೊಂಡು 2019ರಲ್ಲಿ ನಿವೃತ್ತರಾಗಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read