ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಸ್ವಾಗತ…..!

ಶಿವಮೊಗ್ಗ: 2023 -24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಕೂಡ ಶಾಲೆಗಳು ಪುನರಾರಂಭಗೊಂಡವು.

ಇಂದು ಬೆಳಿಗ್ಗೆ ದುರ್ಗಿಗುಡಿಯ ಸರ್ಕಾರಿ ಶಾಲೆಯಲ್ಲಿ ಸಂಭ್ರಮ ಮನೆಮಾಡಿತ್ತು. ಮಕ್ಕಳನ್ನು ಸ್ವಾಗತಿಸಲು ಶಿಕ್ಷಕರು, ಪೋಷಕರು, ಜನಪ್ರತಿನಿಧಿಗಳು ಸಿದ್ಧತೆ ನಡೆಸಿದ್ದರು. ತಳಿರು ತೋರಣಗಳಿಂದ ಶಾಲೆಯನ್ನು ಅಲಂಕರಿಸಲಾಗಿತ್ತು. ಬೆಲೂನುಗಳ ಪ್ರದರ್ಶನ ವಿಶೇಷವಾಗಿತ್ತು. ಕಳೆದೆರಡು ದಿನಗಳಿಂದ ಶಾಲೆಗಳು ಪ್ರಾರಂಭವಾಗಿದ್ದರೂ ಕೂಡ ಸ್ವಚ್ಛತೆ ಮತ್ತು ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಮಕ್ಕಳೆಲ್ಲರೂ ಯೂನಿಫಾರ್ಮ್ನಲ್ಲಿ ಬಂದು ಸಂಭ್ರಮದಿಂದ ತರಗತಿಗಳಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಪ್ರಾರಂಭೋತ್ಸವದ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು. ಮಕ್ಕಳಿಗೆ ಯೂನಿಫಾರ್ಮ್ ಮತ್ತು ಪುಸ್ತಕಗಳನ್ನು ನೀಡಲಾಯಿತು. ಎಲ್ಲಾ ಮಕ್ಕಳಿಗೂ ಸಿಹಿ ಹಂಚಲಾಯಿತು. ಹಾಗೆಯೇ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಕಟೌಟ್ ಅನ್ನು ಪ್ರದರ್ಶಿಸಿ ಅಭಿನಂದನೆ ಸಲ್ಲಿಸಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read