HomeKarnatakaಮೊದಲ ವಿಮಾನದಲ್ಲಿ ಸಂಚರಿಸಿದ ಹೆಮ್ಮೆ ತಮ್ಮದಾಗಿಸಿಕೊಳ್ಳುವ ತವಕ; ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿದ ಬೇಡಿಕೆ

ಮೊದಲ ವಿಮಾನದಲ್ಲಿ ಸಂಚರಿಸಿದ ಹೆಮ್ಮೆ ತಮ್ಮದಾಗಿಸಿಕೊಳ್ಳುವ ತವಕ; ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿದ ಬೇಡಿಕೆ

ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಈಗಾಗಲೇ ನೆರವೇರಿದ್ದು, ವಿಮಾನ ಸಂಚಾರಕ್ಕೆ ಸಿದ್ಧತೆ ನಡೆದಿದೆ. ಈ ಮೊದಲು ಆಗಸ್ಟ್ 11 ರಿಂದ ವಿಮಾನ ಹಾರಾಟ ನಡೆಸಲಿದೆ ಎಂದು ಹೇಳಲಾಗಿತ್ತಾದರೂ ತಾಂತ್ರಿಕ ಸಮಸ್ಯೆಗಳ ಕಾರಣಕ್ಕೆ ಇದನ್ನು ಆಗಸ್ಟ್ 31ಕ್ಕೆ ಮುಂದೂಡಿಕೆ ಮಾಡಲಾಗಿದೆ.

ವಿಮಾನ ಹಾರಾಟಕ್ಕೆ ದಿನಾಂಕ ನಿಗದಿಯಾಗಿರುವುದರ ಮಧ್ಯೆ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ವಿಮಾನಯಾನಕ್ಕೆ ಅನುಮತಿ ಪಡೆದಿರುವ ಇಂಡಿಗೋ ಸಂಸ್ಥೆ ಬುಧವಾರದಿಂದ ಟಿಕೆಟ್ ಬುಕಿಂಗ್ ಆರಂಭಿಸಿದ್ದು ಮೊದಲ ದಿನವೇ ಟಿಕೆಟ್ ಬುಕ್ಕಿಂಗ್ ಗಾಗಿ ಪೈಪೋಟಿ ಏರ್ಪಟ್ಟಿದೆ. ಇದರ ಪರಿಣಾಮ ಟಿಕೆಟ್ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ.

ಆರಂಭದಲ್ಲಿ 3,999 ರೂಪಾಯಿ ಇದ್ದ ಟಿಕೆಟ್ ದರ ಬಳಿಕ 5,900 ರೂಪಾಯಿ, 6900 ರೂಪಾಯಿ ತಲುಪಿ ಬಳಿಕ 7,300 ರೂಪಾಯಿಗಳಿಗೆ ಏರಿಕೆಯಾಗಿದೆ. ಮೊದಲ ವಿಮಾನದಲ್ಲಿ ಪ್ರಯಾಣಿಸಿದ ಹೆಮ್ಮೆ ತಮ್ಮದಾಗಿಸಿಕೊಳ್ಳುವ ತವಕದಲ್ಲಿ ಟಿಕೆಟ್ ಬುಕ್ಕಿಂಗ್ ಗಾಗಿ ಪೈಪೋಟಿ ಏರ್ಪಟ್ಟಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular